alex Certify ಭರ್ಜರಿ ಬ್ಯಾಟಿಂಗ್: ಬರೋಬ್ಬರಿ 17 ಸಿಕ್ಸರ್ ಸಿಡಿಸಿ ದಾಖಲೆ ಬರೆದ ಪುನೀತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಬ್ಯಾಟಿಂಗ್: ಬರೋಬ್ಬರಿ 17 ಸಿಕ್ಸರ್ ಸಿಡಿಸಿ ದಾಖಲೆ ಬರೆದ ಪುನೀತ್

ಚೆನ್ನೈ: ಚೆನ್ನೈನ ಗುರುನಾನಕ್ ಕಾಲೇಜು ಮೈದಾನದಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಪಂದ್ಯದಲ್ಲಿ ಮೇಘಾಲಯ ತಂಡದ ನಾಯಕ ಪುನೀತ್ ಬಿಷ್ಟ್ ದಾಖಲೆ ಬರೆದಿದ್ದಾರೆ.

ಮಿಜೋರಾಂ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಪುನೀತ್ ಅವರು 17 ಸಿಕ್ಸರ್ ಬಾರಿಸುವ ಮೂಲಕ ಟಿ20 ಪಂದ್ಯವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ಮುಂಬೈನ ಶ್ರೇಯಸ್ ಅಯ್ಯರ್ 15 ಸಿಕ್ಸರ್ ಸಿಡಿಸಿದ್ದಾರೆ. ಅವರು ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಈ ದಾಖಲೆ ಬರೆದಿದ್ದಾರೆ. ಪುನೀತ್ ಬಿಷ್ಟ್ 51 ಎಸೆತಗಳಲ್ಲಿ 17 ಸಿಕ್ಸರ್, 6 ಬೌಂಡರಿ ಸಹಿತ ಅಜೇಯ 146 ರನ್ ಗಳಿಸಿದ್ದಾರೆ. ಮೇಘಾಲಯ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿದೆ. ಮಿಜೋರಾಂ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿ 130 ರನ್ ಅಂತರದಿಂದ ಸೋಲು ಕಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...