ಅಹಮದಾಬಾದ್: ಬಾರ್ಡರ್ –ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಆರ್. ಅಶ್ವಿನ್ ಹೊಸ ದಾಖಲೆ ನಿರ್ಮಿಸಿದ್ದಾರೆ. 91 ರನ್ ಗೆ 6 ವಿಕೆಟ್ ಗಳಿಸಿ ಟೆಸ್ಟ್ ಕ್ರಿಕೆಟ್ ನಲ್ಲಿ 32ನೇ ಬಾರಿಗೆ ಐದು ವಿಕೆಟ್ ಪಡೆದ ಅವರು ಭಾರತದಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಗೊಂಚಲು ಪಡೆದ ಅನಿಲ್ ಕುಂಬ್ಳೆ ದಾಖಲೆ ಹಿಂದಿಕ್ಕಿದ್ದಾರೆ.
ಅನಿಲ್ ಕುಂಬ್ಳೆ 25 ಬಾರಿ ಈ ಸಾಧನೆ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧ 112 ವಿಕೆಟ್ ಪಡೆದ ಅಶ್ವಿನ್ ತಂಡ ಒಂದರ ವಿರುದ್ಧ ಗರಿಷ್ಠ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅನಿಲ್ ಕುಂಬ್ಳೆ 111 ವಿಕೆಟ್ ಪಡೆದಿದ್ದ ದಾಖಲೆ ಭಗ್ನವಾಗಿದೆ.
ಭಾರತದಲ್ಲಿ ಅತಿ ಹೆಚ್ಚು ಬಾರಿ ಟೆಸ್ಟ್ ಇನ್ನಿಂಗ್ಸ್ ನಲ್ಲಿ ಐದಕ್ಕೂ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಅಶ್ವಿನ್ ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. 26ನೇ ಬಾರಿಗೆ ಅವರು ಈ ಸಾಧನೆ ಮಾಡಿದ್ದು, ಅನಿಲ್ ಕುಂಬ್ಳೆ ದಾಖಲೆ ಹಿಂದಿಕ್ಕಿದ್ದಾರೆ. ಟೆಸ್ಟ್ ನಲ್ಲಿ ಅಶ್ವಿನ್ ಒಟ್ಟಾರೆ 32 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ.