ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನ ಎರಡನೇ ದಿನ ಆರ್. ಅಶ್ವಿನ್ ಅವರು ಹರ್ಭಜನ್ ಸಿಂಗ್ ಅವರ ದಾಖಲೆ ಹಿಂದಿಕ್ಕಿದ್ದಾರೆ.
23.5 ಓವರ್ ಬೌಲಿಂಗ್ ಮಾಡಿದ ಅಶ್ವಿನ್ ಐದು ವಿಕೆಟ್ ಪಡೆದಿದ್ದಾರೆ. ಸ್ವದೇಶದಲ್ಲಿನ ಟೆಸಟ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಶ್ವಿನ್, ಹರ್ಭಜನ್ ಸಿಂಗ್ ಅವರ ದಾಖಲೆ ಹಿಂದಿಕ್ಕಿದ್ದಾರೆ. ಅವರ ಖಾತೆಯಲ್ಲಿ 266 ವಿಕೆಟ್ ಗಳು ಇವೆ.
ಭಾನುವಾರ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಗಳಿಸಿದ ಆರ್. ಅಶ್ವಿನ್ 266 ವಿಕೆಟ್ ಗಳಿಸಿದಂತಾಗಿದೆ. ಹರ್ಭಜನ್ ಸಿಂಗ್ ಅವರು 265 ವಿಕೆಟ್ ಗಳಿಸಿದ್ದಾರೆ. ಅನಿಲ್ ಕುಂಬ್ಳೆ 350 ವಿಕೆಟ್ ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ಸ್ವದೇಶದಲ್ಲಿ ನಡೆದ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದು, ಹರ್ಭಜನ್ ಎರಡನೇ ಸ್ಥಾನದಲ್ಲಿದ್ದರು. ಹರ್ಭಜನ್ ಅವರನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.
ಅಂದ ಹಾಗೇ, ಆರ್. ಅಶ್ವಿನ್ 23 ಸಲ ಅತಿಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಈ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್(45). ರಂಗನಾ ಹೆರಾತ್(26), ಅನಿಲ್ ಕುಂಬ್ಳೆ(25) ಮೊದಲ ಮೂರು ಸ್ಥಾನಗಳಲ್ಲಿ ಇದ್ದಾರೆ.