ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೋಮವಾರ ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಲವಾರು ಪ್ರತಿಷ್ಠಿತ ಕ್ರೀಡಾಪಟುಗಳಿಗೆ ವೈಯಕ್ತಿಕ ಆಹ್ವಾನಗಳನ್ನು ನೀಡಲಾಗಿದೆ. ರವೀಂದ್ರ ಜಡೇಜಾ, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ ಮುಂತಾದವರು ಶುಭ ಸಮಾರಂಭದಲ್ಲಿ ಕಾಣಿಸಿಕೊಂಡರೆ, ರೋಹಿತ್ ಶರ್ಮಾ ಮತ್ತು ಎಂ.ಎಸ್. ಧೋನಿ ಅವರು ಕಾಣಿಸಿಕೊಂಡಿಲ್ಲ. ಅವರ ಯಾವುದೇ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿಲ್ಲ. ಇದರಿಂದಾಗಿ ಈ ಜೋಡಿ ನೆಟಿಜನ್‌ಗಳಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಎಂ.ಎಸ್. ಧೋನಿ ಪವಿತ್ರ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸುತ್ತಿರುವ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ರೋಹಿತ್ ಶರ್ಮಾ ಅವರನ್ನು ಕೂಡ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಆದರೆ, ಕೆಲವು ನೆಟಿಜನ್‌ಗಳ ಪ್ರಕಾರ, ಅವರು ಜನವರಿ 25 ರಂದು ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲು ಪತ್ರಿಕಾಗೋಷ್ಠಿಗೆ ಹಾಜರಾಗಬೇಕಿದ್ದ ಕಾರಣ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಹೋಗಲಿಲ್ಲ ಎನ್ನಲಾಗಿದೆ.
ಎಂ.ಎಸ್. ಧೋನಿ ಮತ್ತು ರೋಹಿತ್ ಶರ್ಮಾ ಸಮಾರಂಭದಲ್ಲಿ ಕಾಣಿಸಿಕೊಳ್ಳದಿದ್ದಕ್ಕೆ ನೆಟಿಜನ್‌ಗಳು ಹೀಗೆಲ್ಲಾ ಪ್ರತಿಕ್ರಿಯಿಸಿದ್ದಾರೆ.