ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು, ಅವರೊಂದಿಗೆ ಮೂವರು ಸಹಾಯಕ ಸಿಬ್ಬಂದಿ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾನುವಾರ ಪ್ರಕಟಣೆ ಹೊರಡಿಸಿದ್ದು, ಪುರುಷರ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತು ಇನ್ನೂ ಮೂವರು ಸಹಾಯಕ ಸಿಬ್ಬಂದಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ತಿಳಿಸಿದೆ.
ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಕೋವಿಡ್-19 ಪರೀಕ್ಷೆಯಲ್ಲಿ ರವಿಶಾಸ್ತ್ರಿ ಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ಬೌಲಿಂಗ್ ಕೋಚ್ ಅರುಣ್, ಫೀಲ್ಡಿಂಗ್ ಕೋಚ್ ಶ್ರೀಧರ್, ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಅವರು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಓವಲ್ ಟೆಸ್ಟ್ ಪಂದ್ಯ ನಡೆಯುವಾಗಲೇ ಕೊರೋನಾ ಶಾಕ್ ನೀಡಿದೆ ಎನ್ನಲಾಗಿದೆ.