alex Certify BIG NEWS: ವಿಶ್ವದ ನಂಬರ್ 1 ಆಲ್ ರೌಂಡರ್ ಪಟ್ಟಕ್ಕೇರಿದ ರವೀಂದ್ರ ಜಡೇಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಶ್ವದ ನಂಬರ್ 1 ಆಲ್ ರೌಂಡರ್ ಪಟ್ಟಕ್ಕೇರಿದ ರವೀಂದ್ರ ಜಡೇಜಾ

ಟೀಮ್ ಇಂಡಿಯಾದ ಸ್ಟಾರ್ ಆಲ್‌ ರೌಂಡರ್ ರವೀಂದ್ರ ಜಡೇಜಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವಿಶ್ವದ ನಂಬರ್ 1 ಆಲ್‌ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್‌ನ ಆಲ್‌ರೌಂಡರ್ ಜೇಸನ್ ಹೋಲ್ಡರ್ ಅವರನ್ನು ರವೀಂದ್ರ ಜಡೇಜಾ ಹಿಂದಿಕ್ಕಿದ್ದಾರೆ. ಜಡೇಜಾ, ಹೋಲ್ಡರ್ ಗಿಂತ ಎರಡು ಅಂಕ ಮುಂದಿದ್ದಾರೆ. ಹೋಲ್ಡರ್ 384 ಪಾಯಿಂಟ್ ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ 377 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಭಾರತದ ಇನ್ನೊಬ್ಬ ಆಫ್-ಸ್ಪಿನ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ 353 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ನಂತರದ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಅಶ್ವಿನ್ 850 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ನಂತರದ ಸ್ಥಾನದಲ್ಲಿದ್ದಾರೆ.

ಬ್ಯಾಟ್ಸ್ ಮನ್‌ಗಳ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದ ನಾಯಕ ವಿರಾಟ್ ಕೊಹ್ಲಿ 814 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 891 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್  ಮತ್ತು ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್ಚಾಗ್ನೆ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...