alex Certify ಟೀಂ ಇಂಡಿಯಾಗೆ ಆಘಾತ: ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಹೊರಬಿದ್ದ ಆಟಗಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾಗೆ ಆಘಾತ: ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಹೊರಬಿದ್ದ ಆಟಗಾರ

ತವರು ನೆಲದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ. ಆಟಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಆಘಾತವಾಗಿದೆ. ಆಲ್ ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಸಿಡ್ನಿ ಟೆಸ್ಟ್ ವೇಳೆ ಹೆಬ್ಬೆರಳು ಮುರಿತಕ್ಕೊಳಗಾಗಿದ್ದ ಜಡೇಜಾ ಆಸ್ಟ್ರೇಲಿಯಾದಲ್ಲಿಯೇ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಅವರ ಚೇತರಿಕೆಗೆ 6 ವಾರಗಳ ಸಮಯ ಬೇಕಿದೆ. ಹಾಗಾಗಿ ಇಂಗ್ಲೆಂಡ್ ವಿರುದ್ಧ ನಡೆಯುವ ಸರಣಿಯಿಂದ ಜಡೇಜಾ ಹೊರಗುಳಿಯಲಿದ್ದಾರೆ.

ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5ರಿಂದ ಟೆಸ್ಟ್ ಪಂದ್ಯ ಶುರುವಾಗಲಿದೆ. ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯ, ಐದು ಟಿ-20 ಪಂದ್ಯ, ಮೂರು ಏಕದಿನ ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ. ಉಳಿದ ಎರಡು ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆಯಲಿದೆ.

ಜಡೇಜಾ ಟಿ-20 ಹಾಗೂ ಏಕದಿನ ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ. ಟೆಸ್ಟ್ ಸರಣಿ ನಂತ್ರ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಬಿಸಿಸಿಐ ಹೇಳಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಜಡೇಜಾ ಹೆಸರಿರಲಿಲ್ಲ. ಈಗ ಇನ್ನೆರಡು ಪಂದ್ಯಕ್ಕೂ ಜಡೇಜಾ ಅಲಭ್ಯರಾಗಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಕೊನೆ ಟೆಸ್ಟ್ ಪಂದ್ಯವನ್ನೂ ಜಡೇಜಾ ಆಡಿರಲಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...