
ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ.
ಆಯ್ಕೆ ಸಮಿತಿಯಲ್ಲಿ ಚೇತನ್ ಶರ್ಮಾ, ಶಿವಸುಂದರದಾಸ್, ಸುಬ್ರತೋ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಅವರನ್ನೊಳಗೊಂಡ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ.
2020ರ ಡಿಸೆಂಬರ್‌ನಿಂದ ಕಳೆದ ವರ್ಷದ ಅಂತ್ಯದವರೆಗೆ ಪುರುಷರ ಕ್ರಿಕೆಟ್ ತಂಡದ ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಮುಖ್ಯ ಆಯ್ಕೆಗಾರರಾಗಿ ಮುಂದುವರಿಯಲಿದ್ದಾರೆ ಎಂದು ಶನಿವಾರ ಬಿಸಿಸಿಐ ಹೇಳಿಕೆ ತಿಳಿಸಿದೆ.
ದಕ್ಷಿಣ ವಲಯದಿಂದ ಶ್ರೀಧರನ್ ಶರತ್, ಮಧ್ಯ ವಲಯದಿಂದ ಶಿವಸುಂದರ್ ದಾಸ್, ಪೂರ್ವದಿಂದ ಸುಬ್ರೋತೋ ಬ್ಯಾನರ್ಜಿ ಮತ್ತು ಪಶ್ಚಿಮ ವಲಯದಿಂದ ಸಲೀಲ್ ಅಂಕೋಲಾ ಸಮಿತಿಯಲ್ಲಿರುವ ಇತರ ಆಯ್ಕೆಗಾರರಾಗಿದ್ದಾರೆ.