alex Certify RCB ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RCB ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ

ಇಂದು ದುಬೈನಲ್ಲಿ ನಡೆದ ಐಪಿಎಲ್ ನ 44ನೇ ಪಂದ್ಯದಲ್ಲಿ RCB ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ RCB ತಂಡ ಆರಂಭದಲ್ಲಿ ಆರೋನ್ ಫಿಂಚ್ 15ರನ್ ಗಳಿಸಿ ಸ್ಯಾಮ್ ಕರನ್ ಬೌಲಿಂಗ್‌ನಲ್ಲಿ ಔಟಾದರು.

ನಂತರ ಆರಂಭಿಕ ಆಟಗಾರ ದೇವದತ್ ಪಡಿಕಲ್ 22ರನ್ ಗಳಿಸಿದ್ದು, ಮಿಚೆಲ್ ಸ್ಯಾಂಟ್ನರ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಉತ್ತಮ ಜೊತೆಯಾಟವಾಡಿದ್ದು, ಎಬಿ ಡಿವಿಲಿಯರ್ಸ್ 39ರನ್ ಗಳಿಸಿ ದೀಪಕ್ ಚಹಾರ್ ಬೌಲಿಂಗ್ ನಲ್ಲಿ ಔಟಾದರು. ನಂತರ ಬಂದ ಮೊಯಿನ್ ಅಲಿ ಕೇವಲ 1ರನ್ ಗಳಿಸಿ ಔಟಾದರು. ನಾಯಕ ವಿರಾಟ್ ಕೊಹ್ಲಿ ಕೂಡ 50 ರನ್ ಗಳಿಸಿದ್ದು, ಸ್ಯಾಮ್ ಕರನ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಒಟ್ಟಾರೆ RCB ತಂಡ 6 ವಿಕೆಟ್ ನಷ್ಟಕ್ಕೆ 145ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭದಲ್ಲಿ ಫಾಫ್ ಡು ಪ್ಲೆಸಿಸ್ 25 ರನ್ ಗಳಿಸಿ ಕ್ರಿಸ್ ಮೊರಿಸ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಋತುರಾಜ್ ಗಾಯಕ್ವಾಡ್ ಹಾಗೂ ಅಂಬಟಿ ರಾಯುಡು ಉತ್ತಮ ಜೊತೆಯಾಟವಾಡಿದರು. ಅಂಬಟಿ ರಾಯುಡು 39ರನ್ ಗಳಿಸಿದ್ದು, ಚಹಾಲ್ ಬೌಲಿಂಗ್ ನಲ್ಲಿ ಔಟಾದರು. ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 65 ರನ್ ಗಳಿಸುವ ಮೂಲಕ ಅಜೇಯರಾಗಿ ಉಳಿದರು. ನಾಯಕ ಎಂಎಸ್ ಧೋನಿ ಅಜೇಯ 19 ರನ್ ಗಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ವಿಕೆಟ್ ನಷ್ಟಕ್ಕೆ 150ರನ್ ಗಳಿಸಿ ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...