alex Certify ಅಂಕಪಟ್ಟಿಯಲ್ಲಿ RCB ಗೆ ಅಗ್ರ ಸ್ಥಾನ: ಮೈಲುಗಲ್ಲು ಸ್ಥಾಪಿಸಿದ ಎಬಿ ಡಿ ವಿಲಿಯರ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಕಪಟ್ಟಿಯಲ್ಲಿ RCB ಗೆ ಅಗ್ರ ಸ್ಥಾನ: ಮೈಲುಗಲ್ಲು ಸ್ಥಾಪಿಸಿದ ಎಬಿ ಡಿ ವಿಲಿಯರ್ಸ್

ಅಹಮದಾಬಾದ್ ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1 ರನ್ ರೋಚಕ ಜಯಗಳಿಸಿದೆ.

ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಎಬಿ ಡಿ ವಿಲಿಯರ್ಸ್ ಅಜೇಯ 75 ರನ್ ಗಳಿಸಿದ್ದಾರೆ. ಅವರು ಐಪಿಎಲ್ ನಲ್ಲಿ 5 ಸಾವಿರ ರನ್ ಗಳಿಸಿದ 6 ನೇ ಹಾಗೂ ವಿದೇಶಿಗರ ಪೈಕಿ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

175 ಪಂದ್ಯಗಳಲ್ಲಿ ಎಬಿ ಡಿವಿಲಿಯರ್ಸ್ ಈ ಮೈಲುಗಲ್ಲು ಸ್ಥಾಪಿಸಿದ್ದಾರೆ. ವಿರಾಟ್ ಕೊಹ್ಲಿ, ಸುರೇಶ್ ರೈನಾ, ಶಿಖರ್ ಧವನ್, ರೋಹಿತ್ ಶರ್ಮಾ, ವಾರ್ನರ್ ಅವರು ಈ ಸಾಧನೆ ಮಾಡಿದ್ದಾರೆ.

ಇನ್ನು ಅಂಕಪಟ್ಟಿಯಲ್ಲಿ ಆರ್ಸಿಬಿ ಮೊದಲ ಸ್ಥಾನದಲ್ಲಿದೆ. 6 ಪಂದ್ಯಗಳಲ್ಲಿ 4 ಗೆಲುವು 1 ಸೋಲು ಕಂಡಿರುವ ಆರ್ಸಿಬಿ 10 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. 5 ಪಂದ್ಯಗಳಲ್ಲಿ 4 ಗೆಲುವಿನೊಂದಿಗೆ ಚೆನ್ನೈ ತಂಡ ಎರಡನೇ ಸ್ಥಾನದಲ್ಲಿದೆ. ಡೆಲ್ಲಿ 6 ಪಂದ್ಯಗಳಲ್ಲಿ 4 ಗೆಲುವಿನೊಂದಿಗೆ 3ನೇ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮುಂಬೈ, ಕೊಲ್ಕೊತ್ತಾ, ಪಂಜಾಬ್, ರಾಜಸ್ಥಾನ್, ಹೈದರಾಬಾದ್ ತಂಡಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...