alex Certify IPL ಇತಿಹಾಸದಲ್ಲೇ ಮೊದಲ ಬಾರಿ ಮೊದಲ 3 ಪಂದ್ಯ ಗೆದ್ದ RCB, ಹ್ಯಾಟ್ರಿಕ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಇತಿಹಾಸದಲ್ಲೇ ಮೊದಲ ಬಾರಿ ಮೊದಲ 3 ಪಂದ್ಯ ಗೆದ್ದ RCB, ಹ್ಯಾಟ್ರಿಕ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಚೆನ್ನೈ: 14 ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಜಯಗಳಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 38 ರನ್ ಗಳ ಅಂತರದಿಂದ ಮಣಿಸಿದ್ದು, ಸತತ ಮೂರು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರುಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಆರ್.ಸಿ.ಬಿ. ಪರ ಎಬಿ ಡಿವಿಲಿಯರ್ಸ್ 34 ಎಸೆತಗಳಲ್ಲಿ 76 ರನ್ ಸಿಡಿಸಿದ್ದಾರೆ. ಅವರು 24 ನೇ ಬಾರಿಗೆ ಐಪಿಎಲ್ ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಮೊದಲ 3 ಪಂದ್ಯಗಳನ್ನು ಆರ್ಸಿಬಿ ಜಯಿಸಿದೆ. ಐಪಿಎಲ್ ಆವೃತ್ತಿಯೊಂದರ ಮೊದಲ ಮೂರು ಪಂದ್ಯಗಳನ್ನು ಜಯಿಸಿದ 8 ನೇ ತಂಡ ಆರ್ಸಿಬಿ.

ಈ ಹಿಂದೆ ಚೆನ್ನೈ ತಂಡ ಮೂರು ಬಾರಿ, ಸನ್ರೈಸರ್ಸ್ ಹೈದರಾಬಾದ್, ಗುಜರಾತ್ ಲಯನ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ರಾಜಸ್ಥಾನ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್ ತಲಾ ಒಂದು ಸಲ ಮೊದಲ 3 ಪಂದ್ಯಗಳನ್ನು ಜಯಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...