ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 7 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಮೂರು ಪಂದ್ಯಗಳ ಏಕದಿನ ಸರಣಿ 2 -1 ರಿಂದ ಭಾರತದ ಪಾಲಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 48.2 ಓವರ್ಗಳಲ್ಲಿ 329 ರನ್ ಗಳಿಸಿದ್ದು, ಗೆಲುವಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ 50 ಓವರ್ ಗಳಲ್ಲಿ 9 ವಿಕೆಟ್ ಗೆ 322 ರನ್ ಗಳಿಸಿ ಸೋಲು ಕಂಡಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ 200 ನೇ ಪಂದ್ಯವಾಡಿದ್ದಾರೆ. ಎಂಎಸ್ ಧೋನಿ 332, ಮಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ನಾಯಕರಾಗಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ 128 ಪಂದ್ಯಗಳಲ್ಲಿ ಜಯಗಳಿಸಿದೆ. ಎಂಎಸ್ ಧೋನಿ ನಾಯಕತ್ವದಲ್ಲಿ 178, ಮಹಮ್ಮದ್ ಅಜರುದ್ದಿನ್ ನಾಯಕತ್ವದಲ್ಲಿ 104 ಪಂದ್ಯಗಳಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸಿಕ್ಸರ್ ರುಗಳ ವಿಶ್ವದಾಖಲೆ ನಿರ್ಮಾಣವಾಗಿದೆ. ಮೂರು ಪಂದ್ಯಗಳಲ್ಲಿ ಒಟ್ಟು 69 ಸಿಕ್ಸರ್ ಸಿಡಿಸಲಾಗಿದೆ. ಹಿಂದೆ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ 2019 ರಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 57 ಸಿಕ್ಸರ್ ಸಿಡಿಸಲಾಗಿತ್ತು.