ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ಪಂತ್ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ದಾಖಲೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ ಸಾವಿರ ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಆಗಿದ್ದಾರೆ.
ಈ ವಿಷ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಪಂತ್ ಬದಿಗಟ್ಟಿದ್ದಾರೆ. ಪಂತ್ 27 ಇನ್ನಿಂಗ್ಸ್ ನಲ್ಲಿ ಈ ದಾಖಲೆ ಬರೆದಿದ್ದಾರೆ. ಮಹೇಂದ್ರ ಸಿಂಗ್ ಧೋನಿ 32 ಇನ್ನಿಂಗ್ಸ್ ನಲ್ಲಿ ಸಾವಿರ ರನ್ ಗಳಿಸಿದ್ದರು.
ಕಡಿಮೆ ಇನ್ನಿಂಗ್ಸ್ ನಲ್ಲಿ ಸಾವಿರ ರನ್ ಗಳಿಸಿದ ಭಾರತೀಯ ವಿಕೆಟ್ ಕೀಪರ್ ಪಟ್ಟಿಯಲ್ಲಿ ಪಂತ್ ಮೊದಲ ಸ್ಥಾನಕ್ಕೇರಿದ್ದಾರೆ. ಪಂತ್, ಧೋನಿ ನಂತ್ರದ ಸ್ಥಾನದಲ್ಲಿ ಫಾರೂಕ್ ಎಂಜಿನಿಯರ್ ಮೂರನೇ ಸ್ಥಾನದಲ್ಲಿದ್ದಾರೆ. ರಿದ್ದಿಮಾನ್ ಸಾಹ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 39 ಇನ್ನಿಂಗ್ಸ್ ನಲ್ಲಿ ಸಾವಿರ ರನ್ ಗಳಿಸಿದ ನಯನ್ ಮೊಂಗಿಯಾ ಐದನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂತ್ 23 ರನ್ ಗಳಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ್ದಾರೆ.