ಕೊಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯವನ್ನು ಜಯಿಸುವ ಮೂಲಕ ಭಾರತ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ 31 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ನೆರವಿನಿಂದ 56 ರನ್ ಸಿಡಿಸಿದ್ದಾರೆ.
ಈ ಮೂಲಕ ರೋಹಿತ್ ಶರ್ಮಾ ಮತ್ತು ಅಂತರರಾಷ್ಟ್ರೀಯ ಟಿ20 ಯಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆ ಹಿಂದಿಕ್ಕಿದ್ದಾರೆ. ಅತಿ ಹೆಚ್ಚು ಸಲ 50 ಪ್ಲಸ್ ರನ್ ಗಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಭಾನುವಾರದ ಪಂದ್ಯದಲ್ಲಿ 56 ರನ್ ಗಳಿಸಿದ ರೋಹಿತ್ ಶರ್ಮಾ ಅವರಿಗೆ ಇದು 30 ನೇ ಅರ್ಧಶತಕವಾಗಿದೆ. 119 ಪಂದ್ಯಗಳಿಂದ ರೋಹಿತ್ ಈ ಸಾಧನೆ ಮಾಡಿದ್ದಾರೆ. ಅವರು 3197 ರನ್ ಗಳಿಸಿದ್ದು, ಇದರಲ್ಲಿ 4 ಶತಕ ಸೇರಿವೆ.
ವಿರಾಟ್ ಕೊಹ್ಲಿ 29 ಬಾರಿ 50 ಪ್ಲಸ್ ರನ್ ಗಳಿಸಿದ್ದಾರೆ. ಕೊಹ್ಲಿ 95 ಪಂದ್ಯಗಳಿಂದ 29 ಅರ್ಧಶತಕ ಸಹಿತ 3227 ರನ್ ಗಳಿಸಿದ್ದಾರೆ.
ರೋಹಿತ್ ಶರ್ಮ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 150 ಸಿಕ್ಸರ್ ಬಾರಿಸಿದ ಎರಡನೇ ಆಟಗಾರನಾಗಿದ್ದಾರೆ. ನ್ಯೂಜಿಲೆಂಡ್ ನ ಮಾರ್ಟಿನ್ ಗಪ್ಟಿಲ್ 112 ಪಂದ್ಯಗಳಲ್ಲಿ 161 ಸಿಕ್ಸರ್ ಸಿಡಿಸಿದ್ದು, ಮೊದಲ ಸ್ಥಾನದಲ್ಲಿದ್ದಾರೆ.