ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋತ ನಂತರ ರೋಹಿತ್ ಶರ್ಮಾ ಕಣ್ಣೀರಿಟ್ಟಿದ್ದಾರೆ.
ಟಿ20 ವಿಶ್ವಕಪ್ ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳಿಂದ ಹೀನಾಯವಾಗಿ ಸೋತಿರುವ ಭಾರತ ಕ್ರಿಕೆಟ್ ತಂಡ ಮತ್ತೊಂದು ಐಸಿಸಿ ಟೂರ್ನಿಯಲ್ಲಿ ತತ್ತರಿಸಿ ಹೋಗಿದ್ದು, ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ. ಸೋಲಿನ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಡಗೌಟ್‌ನಲ್ಲಿ ಅಳುತ್ತಿರುವುದು ಕಂಡು ಬಂದಿದೆ.
ಅಡಿಲೇಡ್ ಓವಲ್‌ನಲ್ಲಿ ರೋಹಿತ್ ಅಳುವುದನ್ನು ಕ್ಯಾಮೆರಾಗಳು ಸೆರೆಹಿಡಿದವು. ಬಳಿಕ ಅವರನ್ನು ಭಾರತದ ಕೋಚ್ ರಾಹುಲ್ ದ್ರಾವಿಡ್ ಸಂತೈಸಿದ್ದಾರೆ.
ಹಲವಾರು ಟ್ವಿಟ್ಟರ್ ಬಳಕೆದಾರರು ರೋಹಿತ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಭಾವೋದ್ರಿಕ್ತರಾಗಿರುವುದನ್ನು ಕಾಣಬಹುದು. ರೋಹಿತ್ ಅಳುತ್ತಿರುವುದನ್ನು ಕಂಡು ಅಭಿಮಾನಿಯಾಗಿ ನನಗೆ ನೋವು ತಂದಿದೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದಾರೆ.
ರೋಹಿತ್ ಶರ್ಮಾ ಉತ್ತಮ ಸ್ಕೋರ್ ಮಾಡಲು ವಿಫಲರಾದರು. ರೋಹಿತ್ 28 ಎಸೆತಗಳಲ್ಲಿ ಕೇವಲ 27 ರನ್ ಗಳಿಸಿದರು. ಕೆಎಲ್ ರಾಹುಲ್ 5 ಎಸೆತಗಳಲ್ಲಿ 5 ರನ್ ಗಳಿಸಿ ಮತ್ತೊಂದು ನಿರಾಶಾದಾಯಕ ಪ್ರದರ್ಶನ ನೀಡಿದರು. ಅತ್ಯುತ್ತಮ ಟಿ20 ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿರುವ ಸೂರ್ಯಕುಮಾರ್ ಯಾದವ್ 10 ಎಸೆತಗಳಲ್ಲಿ 14 ರನ್ ಗಳಿಸುವ ಮೂಲಕ ದೊಡ್ಡ ಸ್ಕೋರ್ ಗಳಿಸಲು ಸಾಧ್ಯವಾಗಲಿಲ್ಲ.
ಗುರುವಾರ ಅಡಿಲೇಡ್ ಓವಲ್‌ನಲ್ಲಿ 16 ಓವರ್‌ಗಳಲ್ಲಿ 169 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 47 ಎಸೆತಗಳಲ್ಲಿ 86 ರನ್ ಮತ್ತು ಜೋಸ್ ಬಟ್ಲರ್ 49 ಎಸೆತಗಳಲ್ಲಿ 80 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಮೂಲಕ ಇಂಗ್ಲೆಂಡ್ ಫೈನಲ್ ಪ್ರವೇಶಿಸಿದ್ದು, ಭಾನುವಾರ ಎಂಸಿಜಿಯಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.
ವಿರಾಟ್ ಕೊಹ್ಲಿ 40 ಎಸೆತಗಳಲ್ಲಿ 50 ಮತ್ತು ಹಾರ್ದಿಕ್ ಪಾಂಡ್ಯ 33 ಎಸೆತಗಳಲ್ಲಿ 63 ರನ್ ಗಳಿಸಿದ ನಂತರ ಭಾರತವು ಆರು ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.
ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ರೋಹಿತ್ ಶರ್ಮಾ, ತಂಡವು ಒತ್ತಡವನ್ನು ನಿಭಾಯಿಸಲು ವಿಫಲವಾಗಿದೆ ಎಂದು ಹೇಳಿದರು.
https://twitter.com/Darshancult45/status/1590664987030482944