ನವದೆಹಲಿ: ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದವರಿಗೆ ನೀಡುವ ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಪ್ರಶಸ್ತಿ ಆಯ್ಕೆ ಸಮಿತಿ ಮಾಡಿದ ಶಿಫಾರಸಿಗೆ ಕೇಂದ್ರ ಕ್ರೀಡಾ ಮಂತ್ರಾಲಯ ಅನುಮೋದನೆ ನೀಡಿದ್ದು ಭಾರತ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಅವರೊಂದಿಗೆ ಅಥ್ಲೆಟಿಕ್ಸ್ ಗಳಾದ ಮರಿಯಪ್ಪನ್ ತಂಗವೇಲು, ಹಾಕಿ ಆಟಗಾರ್ತಿ ರಾಣಿ ರಾಮ್ ಪಾಲ್, ಮಾಣಿಕ್ ಬಾತ್ರಾ, ವಿನೇಶ್ ಪೊಗಟ್ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಅವಾರ್ಡ್ ಘೋಷಣೆಯಾಗಿದೆ. ಕ್ರಿಕೆಟಿಗ ಇಶಾಂತ್ ಶರ್ಮಾ ಮತ್ತು ದೀಪ್ತಿ ಶರ್ಮಾ ಅವರಿಗೆ ಅರ್ಜುನ ಪ್ರಶಸ್ತಿ ಘೋಷಣೆಯಾಗಿದೆ.
ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ವಿರಾಟ್ ಕೊಹ್ಲಿ ಅವರ ನಂತರ ರೋಹಿತ್ ಶರ್ಮಾ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾದ ಕ್ರಿಕೆಟಿಗರಾಗಿದ್ದಾರೆ.