ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಸ್ತುತ ಆಟದಿಂದ ದೂರವಿದ್ದು, ವಿಶ್ರಾಂತಿ ಸಮಯ ಆನಂದಿಸುತ್ತಿದ್ದಾರೆ. ಆಗಾಗ್ಗೆ ತಮ್ಮ ಕುಟುಂಬದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಅವರು ಏಷ್ಯಾ ಕಪ್ 2023 ರ ಮೊದಲು ತಮ್ಮ ಕುಟುಂಬದೊಂದಿಗೆ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಏಷ್ಯಾ ಕಪ್ 2023 ಕ್ಕೆ ಮುನ್ನ ರೋಹಿತ್ ತಮ್ಮ ಪತ್ನಿ ಮತ್ತು ಮಗಳ ಜೊತೆಗೆ ತಿರುಪತಿಗೆ ಭೇಟಿ ನೀಡಿ ಸ್ವಾಮಿ ಆಶೀರ್ವಾದ ಪಡೆದುಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ತಿರುಮಲ ದೇವಸ್ಥಾನದಲ್ಲಿ ಭಕ್ತರು, ಹಲವಾರು ಅಭಿಮಾನಿಗಳು ಕ್ರಿಕೆಟಿಗ ರೋಹಿತ್ ಶರ್ಮಾ ಅವರನ್ನು ಗುರುತಿಸಿ ಫೋಟೋ, ವಿಡಿಯೋ ತೆಗೆದಿದ್ದಾರೆ. ಭಾರೀ ಭದ್ರತೆಯ ಹೊರತಾಗಿಯೂ ಫೋಟೋ ಕ್ಲಿಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸೆಪ್ಟೆಂಬರ್ 2 ರಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ತಮ್ಮ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಭಾರತ ತಂಡವು ಏಷ್ಯಾ ಕಪ್ ಅಭಿಯಾನವನ್ನು ಪ್ರಾರಂಭಿಸುತ್ತದೆ. ನಂತರ ಅದೇ ಸ್ಥಳದಲ್ಲಿ ಸೆಪ್ಟೆಂಬರ್ 4 ರಂದು ನೇಪಾಳವನ್ನು ಎದುರಿಸಲಿದೆ. ಏಷ್ಯಾ ಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗಲಿರುವ ಮುಂಬರುವ ವಿಶ್ವಕಪ್‌ಗೆ ಪ್ರಮುಖ ತರಬೇತಿ ಆಗಿದೆ.
https://twitter.com/Jagadishroyspr/status/1690631270085394432