ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ 20 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಹಿತ ಅಜೇಯ 46 ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.
ಅವರು ಟಿ20 ಯಲ್ಲಿ 176 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಯಲ್ಲಿ ನ್ಯೂಜಿಲೆಂಡ್ ಆಟಗಾರ ಮಾರ್ಟಿನ್ ಗಪ್ಟಿಲ್ 172 ಸಿಕ್ಸರ್ ಬಾರಿಸಿದ್ದಾರೆ. ಕ್ರಿಸ್ ಗೆಲ್ 124 ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ನ ಇಯಾನ್ ಮಾರ್ಗನ್ 120, ಆಸ್ಟ್ರೇಲಿಯಾದ ಆರನ್ ಫಿಂಚ್ 119 ಸಿಕ್ಸರ್ ಸಿಡಿಸಿ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರು
176 – ರೋಹಿತ್ ಶರ್ಮಾ*
172 – ಮಾರ್ಟಿನ್ ಗಪ್ಟಿಲ್
124 – ಕ್ರಿಸ್ ಗೇಲ್
120 – ಇಯಾನ್ ಮಾರ್ಗನ್
119 – ಆರನ್ ಫಿಂಚ್
ರೋಹಿತ್ ಶರ್ಮಾ ಭಾರತಕ್ಕಾಗಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳ(Man of the Match awards) ಗಣ್ಯರ ಪಟ್ಟಿಯಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿಯನ್ನು ಸರಿಗಟ್ಟಿದರು. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.
ಭಾರತಕ್ಕಾಗಿ ಹೆಚ್ಚಿನ MOM ಪ್ರಶಸ್ತಿಗಳು
76 – ಸಚಿನ್ ತೆಂಡೂಲ್ಕರ್
58 – ವಿರಾಟ್ ಕೊಹ್ಲಿ
37 – ರೋಹಿತ್ ಶರ್ಮಾ*
37 – ಸೌರವ್ ಗಂಗೂಲಿ