alex Certify ಪಂದ್ಯ ನಡೆಯುತ್ತಿದ್ದ ವೇಳೆ ರೋಹಿತ್ ಶರ್ಮಾ ಕದ್ದು ತಿಂದಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂದ್ಯ ನಡೆಯುತ್ತಿದ್ದ ವೇಳೆ ರೋಹಿತ್ ಶರ್ಮಾ ಕದ್ದು ತಿಂದಿದ್ದೇನು…?

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯ ಎರಡು ಪಂದ್ಯಗಳಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮೈದಾನಕ್ಕಿಳಿದಿಲ್ಲ. ಟೀಂ ಇಲೆವನ್ ನಲ್ಲಿರದ ರೋಹಿತ್ ಶರ್ಮಾ, ಹೊರಗೆ ಕುಳಿತು ಪಂದ್ಯ ವೀಕ್ಷಿಸಿದ್ದಾರೆ. ಈ ಮಧ್ಯೆ ರೋಹಿತ್ ಶರ್ಮಾ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ವಿಟರ್ ಬಳಕೆದಾರರಿಗೆ ಆಹಾರವಾಗಿದೆ.

ರೋಹಿತ್ ಶರ್ಮಾ, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಜೊತೆ ಕುಳಿತುಕೊಂಡಿದ್ದಾರೆ. ಮಧ್ಯೆ ಕದ್ದು ತಿನ್ನುತ್ತಿದ್ದಾರೆ. ಇದು ಟಿ-20 ಎರಡನೇ ಪಂದ್ಯದ ವಿಡಿಯೋ. ರೋಹಿತ್ ಶರ್ಮಾ ಪಂದ್ಯದಲ್ಲಿ ಆಡದಿರಲು ವಡಾ ಪಾವ್ ಮುಖ್ಯ ಕಾರಣವೆಂದು ಟ್ವಟರ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ. ರೋಹಿತ್ ಶರ್ಮಾ ಏನು ತಿನ್ನುತ್ತಿದ್ದಾರೆಂಬುದು ಗೊತ್ತಾಗಿಲ್ಲ. ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ.

ಮೊದಲ ಎರಡು ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರಿಗೆ ಅವಕಾಶ ನೀಡದ ಕಾರಣ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಕ್ರಿಕೆಟ್ ಅಭಿಮಾನಿಗಳು ಕೋಪಗೊಂಡಿದ್ದಾರೆ. ಮುಂದಿನ ಪಂದ್ಯದಲ್ಲಿ ಹಿಟ್‌ಮ್ಯಾನ್‌ ಮರಳಿ ಬರುವ ನಿರೀಕ್ಷೆಯಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...