alex Certify ಬ್ರೇಕಿಂಗ್ ನ್ಯೂಸ್: ಸೌರವ್ ಗಂಗೂಲಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಸೌರವ್ ಗಂಗೂಲಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರಾಗಿದೆ. ಗಂಗೂಲಿಗೆ ಎದೆ ನೋವು ಕಾಣಿಸಿಕೊಂಡಿದೆ. ಅವ್ರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೀಂ ಇಂಡಿಯಾದ ತಂಡದ ಮಾಜಿ ನಾಯಕ ಗಂಗೂಲಿ ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಅವ್ರಿಗೆ ಹೃದಯಾಘಾತವಾಗಿದೆ ಎಂದು ಮೂಲಗಳು ಹೇಳಿವೆ. ಸದ್ಯ ಗಂಗೂಲಿ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

48 ವರ್ಷದ ಸೌರವ್ ಗಂಗೂಲಿ ಜಿಮ್ ನಲ್ಲಿ ತಲೆತಿರುಗಿ ಬಿದ್ದಿದ್ದಾರೆ. ತಕ್ಷಣ ಅವ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಗಂಗೂಲಿ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...