ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕೊತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈಗ ಚೇತರಿಸಿಕೊಂಡಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಸೌರವ್ ಗಂಗೂಲಿ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ತೊಂದರೆ ಇರುವುದನ್ನು ಗಮನಿಸಿ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ಇದೀಗ ಸೌರವ್ ಗಂಗೂಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಮನೆಗೆ ಕಳುಹಿಸಲಾಗುತ್ತಿದೆ. ಕೆಲ ವಾರಗಳ ಕಾಲ ಸೌರವ್ ಗಂಗೂಲಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.