
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಭಾರತ ಕ್ರಿಕೆಟ್ ಇತಿಹಾಸದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಎಂಎಸ್ ಧೋನಿ ಒಬ್ಬರಾಗಿದ್ದಾರೆ ಎಂದು ತಿಳಿಸಿದ್ದಾರೆ.
ನೀಲಿ ಬಣ್ಣದ ಜೆರ್ಸಿಯಲ್ಲಿ ಅವರ ಅನುಪಸ್ಥಿತಿ ನಮಗೆ ಕಾಡಲಿದೆ. ಆದರೆ, ಹಳದಿ ಬಣ್ಣದ ಜೆರ್ಸಿಯಲ್ಲಿ ಧೋನಿ ನಮ್ಮೊಂದಿಗಿರುತ್ತಾರೆ. ಸೆಪ್ಟೆಂಬರ್ 19 ರಂದು ಟಾಸ್ ವೇಳೆ ಅವರನ್ನು ಭೇಟಿ ಆಗುತ್ತೇನೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.
ಐಪಿಎಲ್ ಟೂರ್ನಿಯ ಮೊದಲ ಪಂದ್ಯ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸೆಪ್ಟೆಂಬರ್ 19 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಟಾಸ್ ವೇಳೆ ಭೇಟಿಯಾಗುವುದಾಗಿ ಹೇಳಿದ್ದಾರೆ. ಯುಎಇನಲ್ಲಿ ಐಪಿಎಲ್ ಟೂರ್ನಿ ನಡೆಯಲಿದೆ.