
ಭಾರತದ ಕ್ರಿಕೆಟ್ ತಂಡದ ಓಪನಿಂಗ್ ಬ್ಯಾಟ್ಸ್‌ಮನ್ ಶಿಖರ್ ಧವನ್ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಶಿಖರ್ ಧವನ್ 2010ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಶಿಖರ್ ಧವನ್ ಭಾರತದ ಅತ್ಯುತ್ತಮ ಆರಂಭಿಕ ಬ್ಯಾಟ್ಸ್‌ಮನ್ ಆಗಿದ್ದಾರೆ.
ಶಿಖರ್ ಧವನ್ 1985 ಡಿಸೆಂಬರ್ 5ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಕಷ್ಟು ಕ್ರಿಕೆಟಿಗರು ಶಿಖರ್ ಧವನ್ ಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.