
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಆಕರ್ಷಕ ಶತಕ ಸಿಡಿಸಿದ್ದಾರೆ.
ಟಾಸ್ ಗೆದ್ದು ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ರೋಹಿತ್ ಶರ್ಮ 61, ಶುಭಮನ್ ಗಿಲ್ 51, ವಿರಾಟ್ ಕೊಹ್ಲಿ 51, ಶ್ರೇಯಸ್ ಅಯ್ಯರ್ ಅಜೇಯ 104, ಕೆ.ಎಲ್. ರಾಹುಲ್ ಅಜೇಯ 88 ರನ್ ಗಳಿಸಿದ್ದಾರೆ.
ಭಾರತ ಬೃಹತ್ ಮೊತ್ತ ಕಲೆಹಾಕಿದೆ. ಇತ್ತೀಚಿನ ವರದಿ ಬಂದಾಗ ಭಾರತ 48 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 368 ರನ್ ಗಳಿಸಿದೆ.