ಕೋಲ್ಕತ್ತಾ: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೌರವ್ ಗಂಗೂಲಿಗೆ ಜಿಮ್ ಮಾಡುವ ಸಂದರ್ಭದಲ್ಲಿ ಇತ್ತೀಚೆಗಷ್ಟೇ ಲಘು ಹೃದಯಾಘಾತವಾಗಿತ್ತು. ಸೂಕ್ತ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ವಾಪಸ್ ಆಗಿದ್ದ ದಾದಾ ಅವರಿಗೆ ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾರತ-ಇಂಗ್ಲೆಂಡ್ ಟೆಸ್ಟ್: ಚೆನ್ನೈ ತಲುಪಿದ ರಹಾನೆ, ಶರ್ಮಾ
ದಾದಾಗೆ ಮತ್ತೆ ಎದೆನೋವು ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಆತಂಕಗೊಂಡಿದ್ದು, ಬೇಗ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥಿಸಿದ್ದಾರೆ.