alex Certify BREAKING NEWS: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.

ಬಳಿಕ ಎರಡು ಸ್ಟೆಂಟ್ ಅಳವಡಿಸಲಾಗಿದ್ದು, ಚಿಕಿತ್ಸೆ ಪಡೆದು ಗುಣಮುಖರಾದ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 20 ದಿನಗಳ ಅವಧಿಯಲ್ಲಿ ಅವರು ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಗೆ ಅವರು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ವಿಶ್ರಾಂತಿಗೆ ತಜ್ಞ ವೈದ್ಯರು ಸಲಹೆ ನೀಡಿದ್ದಾರೆ. ಗುರುವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಗೂಲಿ ಅವರ ಆರೋಗ್ಯ ವಿಚಾರಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...