ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡುತ್ತಾರೆ ಎನ್ನುವ ವದಂತಿ ಶುದ್ಧ ಸುಳ್ಳು. ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು ಸ್ಪಷ್ಟಪಡಿಸಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿಲ್ಲ ಎಂದು ಜಯ್ ಶಾ ತಿಳಿಸಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವದಂತಿ ಹರಡಿದ್ದ ಹಿನ್ನಲೆಯಲ್ಲಿ ಜೈ ಶಾ ಸ್ಪಷ್ಟಪಡಿಸಿದ್ದಾರೆ.
ಸೌರವ್ ಗಂಗೂಲಿ ಅವರು ತಮ್ಮ ಕ್ರಿಕೆಟ್ ವೃತ್ತಿಜೀವನದ ಮೂವತ್ತು ವರ್ಷಗಳನ್ನು ಪೂರ್ಣಗೊಳಿಸಿದ ಪೋಸ್ಟ್ ಅನ್ನು ಹಂಚಿಕೊಂಡ ನಂತರ ದಾದಾ ರಾಜೀನಾಮೆ ಬಗ್ಗೆ ಊಹಾಪೋಹಗಳು ಹರಡಿದ್ದ ಹಿನ್ನಲೆಯಲ್ಲಿ ಜೈ ಶಾ ಸ್ಪಷ್ಟಪಡಿಸಿದ್ದಾರೆ.
ಆದರೆ, ಸೌರವ್ ಗಂಗೂಲಿ ರಾಜೀನಾಮೆ ನೀಡದಿದ್ರೂ ಅವರು ಮಾಡಿರುವ ರಹಸ್ಯ ಟ್ವೀಟ್ ನಲ್ಲಿ ನಿಜವಾಗಿ ಏನು ಹೇಳಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಸೌರವ್ ಗಂಗೂಲಿ ಅವರು 1992 ರಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದ ಕ್ರಿಕೆಟ್ ತನಗೆ ಬಹಳಷ್ಟು ನೀಡಿದೆ ಎಂದು ಹೇಳುವ ರಹಸ್ಯ ಟ್ವೀಟ್ ಹಂಚಿಕೊಂಡಿದ್ದಾರೆ. ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರವೇಶಿಸುವಾಗ ಅದೇ ರೀತಿಯ ಬೆಂಬಲವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ. ಇಂದು ನಾನು ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ, ಅದು ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ಗಂಗೂಲಿ ಟ್ವಿಟರ್ ನಲ್ಲಿ ಬರೆದಿದ್ದಾರೆ.