ಕೊಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆಯಾಗಲಿದ್ದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ಬಿಜೆಪಿಗೆ ಹತ್ತಿರವಾಗಿರುವ ಸೌರವ್ ಗಂಗೂಲಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಶಾಲೆ ನಿರ್ಮಾಣಕ್ಕಾಗಿ ನೀಡಿದ್ದ ಜಮೀನನ್ನು ವಾಪಸ್ ನೀಡಿದ್ದಾರೆ. ಕೊಲ್ಕೊತ್ತಾದ ಈಶಾನ್ಯ ಪ್ರದೇಶದ ನ್ಯೂಟೌನ್ ನಲ್ಲಿ ಐಸಿಎಸ್ಇ ಶಾಲೆ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಲಾಗಿದ್ದು, ಇದನ್ನು ಗಂಗೂಲಿ ವಾಪಸ್ ನೀಡಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಆಪ್ತರಾಗಿರುವ ಗಂಗೂಲಿ ರಾಜಕೀಯ ಸೇರ್ಪಡೆಯನ್ನು ಮೊದಲಿನಿಂದಲೂ ನಿರಾಕರಿಸುತ್ತಲೇ ಬಂದಿದ್ದಾರೆ.
ಆದರೆ, 2021 ರ ವಿಧಾನಸಭೆ ಚುನಾವಣೆಗೆ ಮೊದಲು ಅವರು ಬಿಜೆಪಿಗೆ ಸೇರ್ಪಡೆಯಾಗಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿದೆ.