ಕೊಲ್ಕತ್ತಾ: ಅಪೋಲೋ ಆಸ್ಪತ್ರೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಎರಡನೇ ಬಾರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಯಶಸ್ವಿಯಾಗಿ ಚಿಕಿತ್ಸೆ ಮಾಡಲಾಗಿದ್ದು, ಎರಡು ಸ್ಟೆಂಟ್ ಅಳವಡಿಸಲಾಗಿದೆ.
ಅಪೋಲೋ ಆಸ್ಪತ್ರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಸೌರವ್ ಗಂಗೂಲಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗಷ್ಟೇ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೌರವ್ ಗಂಗೂಲಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.