ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆ ಜಾರಿಗೆ ತರಲಾಗುವುದು. ಆಯಾ ಜಿಲ್ಲೆಗಳ ಪ್ರಮುಖ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ಅಲ್ಲದೇ, ಬೇರೆ ಕ್ರೀಡೆಗಳಿಗೂ ಮಹತ್ವ ನೀಡಲಾಗುವುದು.
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಜನ್ಮದಿನದ ಪ್ರಯುಕ್ತ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕ್ರೀಡಾಪಟುಗಳಿಗೆ ಸರ್ಕಾರದಿಂದ ಅಗತ್ಯ ಪ್ರೋತ್ಸಾಹ ನೀಡಲಾಗುವುದು. ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸಲಾಗುವುದು. ಕ್ರೀಡಾ ಕ್ಷೇತ್ರ ಕ್ರಿಯಾಶೀಲವಾಗಿದ್ದು, ಯುವಕರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.