ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿ ಮಾದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಅವರು ನೇಮಕಾತಿ ಆದೇಶ ಪತ್ರವನ್ನು ಹಿಮಾ ದಾಸ್ ಅವರಿಗೆ ಪ್ರದಾನ ಮಾಡಿದ್ದಾರೆ. ಹಿಮಾ ದಾಸ್ ಅಧಿಕಾರ ಸ್ವೀಕರಿಸಿದ ವೇಳೆ ಅಸ್ಸಾಂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಅಸ್ಸಾಂ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದು, ಇದರೊಂದಿಗೆ ನನ್ನ ಬಾಲ್ಯದ ಕನಸು ನನಸಾಗಿದೆ ಎಂದು ಹಿಮಾ ದಾಸ್ ಹೇಳಿದ್ದಾರೆ.