ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ಶ್ರೀಲಂಕಾ-ಭಾರತ ಟಿ20 ಸರಣಿಯ ಎರಡನೇ ಪಂದ್ಯ ನಡೆಯಲಿದೆ.
ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ 62 ರನ್ ಗಳ ಜಯ ಸಾಧಿಸಿದೆ. ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳಲು ರೋಹಿತ್ ಶರ್ಮ ಪಡೆ ಕಾರ್ಯತಂತ್ರ ರೂಪಿಸಿದೆ. ಶ್ರೀಲಂಕಾ ಕೂಡ ತಿರುಗೇಟು ನೀಡಲು ಸಜ್ಜಾಗಿದೆ. ಎರಡನೇ ಪಂದ್ಯವನ್ನು ಶ್ರೀಲಂಕಾ ಗೆದ್ದರೆ ಮೂರನೇ ಪಂದ್ಯದ ಕುತೂಹಲ ಹೆಚ್ಚಲಿದೆ.
ಕಳೆದ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಶ್ರೀಲಂಕಾ 2 ನೇ ಪಂದ್ಯದಲ್ಲಿ ತಿರುಗೇಟು ನೀಡಲು ಕಾರ್ಯತಂತ್ರ ರೂಪಿಸಿದೆ. ಸರಣಿ ಸಮಬಲವಾದಲ್ಲಿ ಭಾನುವಾರ ನಡೆಯಲಿರುವ ಮೂರನೇ ಪಂದ್ಯ ಹೈವೋಲ್ಟೇಜ್ ಮ್ಯಾಚ್ ಆಗಲಿದೆ.
ಉಭಯ ತಂಡಗಳು 23 ಸಲ ಮುಖಾಮುಖಿಯಾಗಿದ್ದು, ಭಾರತ 15 ಬಾರಿ ಗೆಲುವು ಕಂಡಿದೆ. ಶ್ರೀಲಂಕಾ 7 ಸಲ ಜಯಿಸಿದ್ದು, 1 ಪಂದ್ಯದ ಫಲಿತಾಂಶ ಬಂದಿಲ್ಲ.