ನವದೆಹಲಿ: ಕರ್ನಾಟಕದ ಜನತೆ ತೋರಿದ ಪ್ರೀತಿಗೆ ಆಭಾರಿಯಾಗಿದ್ದೇನೆ. ಶಿವಮೊಗ್ಗದಲ್ಲಿ ಓದುವಾಗ ಹೀಗಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನಾನು ಈ ಪದಕವನ್ನು ದೇಶಕ್ಕೆ ಅರ್ಪಿಸುತ್ತೇನೆ. ಬೆಂಬಲ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು ಕನ್ನಡಿಗ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಹೇಳಿದ್ದಾರೆ.
ಟೊಕಿಯೋ ಪ್ಯಾರಾಲಿಂಪಿಕ್ಸ್ ನ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದು ಬಂದ ಅವರು, ಕರ್ನಾಟಕದ ಜನರಿಗೆ ಕೈಮುಗಿದು ಧನ್ಯವಾದ ಹೇಳುತ್ತೇನೆ. ಮುಖ್ಯಮಂತ್ರಿಗಳು ಮತ್ತು ಶಿವಮೊಗ್ಗದ ಜನರಿಗೆ ತಲೆಬಾಗಿ ವಂದಿಸುತ್ತೇನೆ. ಆದಷ್ಟು ಬೇಗನೆ ಪ್ಲಾನ್ ಮಾಡಿಕೊಂಡು ಕರ್ನಾಟಕಕ್ಕೆ ಬರುತ್ತೇನೆ. ಕರ್ನಾಟಕಕ್ಕೆ ಬರಬೇಕು ಎನ್ನುವ ತುಡಿತ ಮತ್ತು ಆಸೆ ಇದೆ ಎಂದು ಹೇಳಿದ್ದಾರೆ.
ಟೋಕಿಯೋದಿಂದ ನವದೆಹಲಿಗೆ ಆಗಮಿಸಿದ ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳು, ಪದಕ ವಿಜೇತರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಮಾತನಾಡಿದ ಕನ್ನಡಿಗ ಸುಹಾಸ್ ಸಂತಸ ವ್ಯಕ್ತಪಡಿಸಿದ್ದಾರೆ. ಅವರು ಉತ್ತರ ಪ್ರದೇಶದ ಗೌತಮಬುದ್ಧನಗರ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.