ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಪರಾಭವಗೊಂಡು ಹೊರಬಿದ್ದ ಭಾರತ ಟಿ20 ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ.
ಟಿ20 ತಂಡಕ್ಕೆ ಮೇಜರ್ ಸರ್ಜರಿ ಮಾಡಲಿದ್ದು, ಹಿರಿಯ ಆಟಗಾರರಿಗೆ ಕೊಕ್ ನೀಡಲಾಗುವುದು. ಹಾರ್ದಿಕ್ ಪಾಂಡ್ಯ ಅವರಿಗೆ ಪೂರ್ಣ ಪ್ರಮಾಣದ ಸಾರಥ್ಯ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಟಿ20 ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು. ರೋಹಿತ್ ಶರ್ಮಾ ಅವರನ್ನು ಟಿ20 ತಂಡದ ನಾಯಕತ್ವದಿಂದ ಬಿಡುಗಡೆಗೊಳಿಸಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಪೂರ್ಣ ಪ್ರಮಾಣದ ಸಾರಥ್ಯವಹಿಸುವ ಸಾಧ್ಯತೆ ಇದೆ.
2024ರ ಟಿ20 ವಿಶ್ವಕಪ್ ವೇಳೆಗೆ ಬಲಿಷ್ಠ ಯುವ ಟಿ20 ತಂಡವನ್ನು ಕಟ್ಟಲು ಬಿಸಿಸಿಐ ಚಿಂತನೆ ನಡೆಸಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ದಿನೇಶ್ ಕಾರ್ತಿಕ್ ಮೊದಲಾದ ಹಿರಿಯ ಆಟಗಾರರನ್ನು ಕೈಬಿಟ್ಟು, ಹೊಸ ಯುವ ತಂಡವನ್ನು ಕಟ್ಟಲು ಚಿಂತನೆ ನಡೆದಿದೆ.
ಐಪಿಎಲ್ ನಲ್ಲಿ ಮಿಂಚು ಹರಿಸಿದ ಪೃಥ್ವಿ ಶಾ, ಶುಭಮನ್ ಗಿಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೊಯಿ, ಉಮ್ರಾನ್ ಮಲಿಕ್ ಮೊದಲಾದ ಯುವ ಆಟಗಾರರಿಗೆ ಟಿ20 ತಂಡದಲ್ಲಿ ಅವಕಾಶ ಕಲ್ಪಿಸಲಾಗುವುದು. ಮುಂದಿನ ಟಿ20 ವಿಶ್ವಕಪ್ ವೇಳೆಗೆ ತಂಡದಿಂದ ಹಿರಿಯರನ್ನು ಕೈಬಿಟ್ಟು, ಹೊಸ ಯುವ ಆಟಗಾರರ ಬಲಿಷ್ಠ ತಂಡ ಕಟ್ಟಲು ಪ್ಲಾನ್ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.