alex Certify ಟಿ 20 ವಿಶ್ವಕಪ್ 2021: ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಫಿಕ್ಸ್, ಪಂದ್ಯ ರದ್ದು ಮಾಡಲು ಸಾಧ್ಯವಿಲ್ಲವೆಂದು ಬಿಸಿಸಿಐ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ 20 ವಿಶ್ವಕಪ್ 2021: ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಫಿಕ್ಸ್, ಪಂದ್ಯ ರದ್ದು ಮಾಡಲು ಸಾಧ್ಯವಿಲ್ಲವೆಂದು ಬಿಸಿಸಿಐ ಸ್ಪಷ್ಟನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸುತ್ತೇವೆ. ಆದರೆ, ಪಾಕ್ ವಿರುದ್ಧದ ಪಂದ್ಯ ರದ್ದು ಮಾಡಲು ಸಾಧ್ಯವಿಲ್ಲವೆಂದು ಅವರು ಹೇಳಿದ್ದಾರೆ.

ಉಗ್ರರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆದರೆ, ಭಾರತ ಮತ್ತು ಪಾಕಿಸ್ತಾನ ಪಂದ್ಯ ರದ್ದು ಮಾಡಲು ಆಗುವುದಿಲ್ಲ. ಐಸಿಸಿ ಟೂರ್ನಿಯಲ್ಲಿ ಆಡಲೇಬೇಕಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಟಿ20 ವಿಶ್ವಕಪ್ ನಲ್ಲಿ ಅಕ್ಟೋಬರ್ 24ರಂದು ಭಾರತ-ಪಾಕಿಸ್ತಾನಗಳ ನಡುವೆ ರದ್ದು ಮಾಡಬೇಕೆಂದು ಕೇಂದ್ರ ಸಚಿವ ಗಿರಿರಾಜ ಸಿಂಗ್ ಹೇಳಿದ್ದರು. ಈ ಬಗ್ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಐಸಿಸಿ ಟೂರ್ನಿಯಲ್ಲಿ ಆಡಬೇಕಿರುವುದರಿಂದ ಪಂದ್ಯ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...