alex Certify ಟಿ20 ವಿಶ್ವಕಪ್: ಇಂಗ್ಲೆಂಡ್ ಬಗ್ಗು ಬಡಿದು ಫೈನಲ್ ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20 ವಿಶ್ವಕಪ್: ಇಂಗ್ಲೆಂಡ್ ಬಗ್ಗು ಬಡಿದು ಫೈನಲ್ ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್

ಅಬುಧಾಬಿ: ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿದ ನ್ಯೂಜಿಲೆಂಡ್ ಫೈನಲ್ ಗೆ ಎಂಟ್ರಿ ಕೊಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು. ಮೊಯಿನ್ ಅಲಿ ಅಜೇಯ 51, ಡೇವಿಡ್ ಮಲನ್ 41, ಬಟ್ಲರ್ 29, ಲಿಯಾಂ ಲಿವಿಂಗ್ ಸ್ಟೋನ್ 17 ರನ್ ಗಳಿಸಿದರು.

ಗೆಲುವಿನ ಗುರಿ ಬೆನ್ನತ್ತಿದ್ದ ನ್ಯೂಜಿಲೆಂಡ್ 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿದೆ. ಡೆರಿಲ್ ಮೆಚೆಲ್ ಅಜೇಯ 72, ಡೆವೊನ್ ಕಾನ್ವೇ 46, ಜೇಮ್ಸ್ ನಿಶಾಮ್ 27 ರನ್ ಗಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...