ಮುಂಬರುವ ಟಿ20 ವಿಶ್ವಕಪ್ ಗಾಗಿ ಆಡಲಿರುವ ಭಾರತ ತಂಡದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರಮುಖ ಬದಲಾವಣೆಯನ್ನು ಘೋಷಿಸಿದೆ.
15 ಜನರ ತಂಡದಲ್ಲಿ ಅಕ್ಸರ್ ಪಟೇಲ್ ಬದಲಿಗೆ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಶಾರ್ದೂಲ್ ಅವರನ್ನು ತಂಡ ನಿರ್ವಹಣೆಯೊಂದಿಗೆ ಚರ್ಚಿಸಿದ ನಂತರ ಸೇರಿಸಲು ನಿರ್ಧಾರ ಮಾಡಿದೆ.
15 ಸದಸ್ಯರ ತಂಡದಲ್ಲಿದ್ದ ಆಲ್ ರೌಂಡರ್ ಅಕ್ಸರ್ ಪಟೇಲ್ ಈಗ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ತಂಡದಲ್ಲಿ ಬದಲಾವಣೆಗೆ ಬಿಸಿಸಿಐ ಕಾರಣವನ್ನು ನಿರ್ದಿಷ್ಟಪಡಿಸದಿದ್ದರೂ, ಟೀಮ್ ಇಂಡಿಯಾ ತಂಡದಲ್ಲಿ ವೇಗದ ಬೌಲಿಂಗ್ ಆಲ್ರೌಂಡರ್ ಆಯ್ಕೆ ಅಗತ್ಯವಾಗಿರಬಹುದು, ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್‌ನಲ್ಲಿ ಬೌಲ್ ಮಾಡುವ ಸಾಧ್ಯತೆಯಿಲ್ಲ. 2019 ರಲ್ಲಿ ಸರ್ಜರಿಯ ನಂತರ ಪಾಂಡ್ಯ ನಿಯಮಿತವಾಗಿ ಬೌಲಿಂಗ್ ಮಾಡಿಲ್ಲ. ಐಪಿಎಲ್ 2021 ರ ಯುಎಇ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಬೌಲಿಂಗ್ ಮಾಡಲಿಲ್ಲ.
ಐಸಿಸಿ ಟಿ 20 ವಿಶ್ವಕಪ್‌ಗೆ ಭಾರತ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.