ಆಸ್ಟ್ರೇಲಿಯಾ ಪ್ರವಾಸದ ನಂತ್ರ ಕ್ರಿಕೆಟ್ ಅಭಿಮಾನಿಗಳಿಗೆ ಭಾರತ-ಇಂಗ್ಲೆಂಡ್ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಅವಕಾಶ ಸಿಗ್ತಿದೆ. ಈ ಪಂದ್ಯಾವಳಿಗಾಗಿ ಎರಡೂ ತಂಡಗಳು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಫೆಬ್ರವರಿಯಲ್ಲಿ ಶುರುವಾಗುವ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಒಂದು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಲಿದೆ.
ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಕ್ಕೆ ಇಂಗ್ಲೆಂಡ್ ವಿರುದ್ಧದ ಪಂದ್ಯ ಮತ್ತಷ್ಟು ಸವಾಲಿನದ್ದಾಗಿರಲಿದೆ. ಪಂದ್ಯಕ್ಕೂ ಮುನ್ನ ಕ್ವಾರಂಟೈನ್ ನಲ್ಲಿರುವ ಟೀಂ ಇಂಡಿಯಾ ಗೆಲುವಿಗೆ ತಂತ್ರ ಸಿದ್ಧಪಡಿಸಲಿದೆ. ಸರಣಿ ಗೆಲುವು ಭಾರತಕ್ಕೆ ಮಹತ್ವದ್ದಾಗಿದೆ.
ಆಸ್ಟ್ರೇಲಿಯಾದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ಪ್ರತಿ ಕ್ಷಣವನ್ನು ಆನಂದಿಸಿದ್ದೇವೆ. ಆದ್ರೆ ಅದನ್ನು ಮರೆತು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಸಿದ್ಧವಾಗಬೇಕಿದೆ. ಇದಕ್ಕಾಗಿ ಮೊದಲು ಪ್ಲಾನ್ ಮಾಡಬೇಕು ಎಂದು ಟೀಂ ಇಂಡಿಯಾದ ಬೌಲಿಂಗ್ ಕೋಚ್ ಅರುಣ್ ಭರತ್ ಹೇಳಿದ್ದಾರೆ.
ಫೆಬ್ರವರಿ 5ರಿಂದ ಚೆನ್ನೈನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.