alex Certify ಪಾಕ್ ವಿರುದ್ಧ ಸೋತವರ ನಡುವೆ ಇಂದು ಫೈಟ್: ಭಾರತ-ನ್ಯೂಜಿಲೆಂಡ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ವಿರುದ್ಧ ಸೋತವರ ನಡುವೆ ಇಂದು ಫೈಟ್: ಭಾರತ-ನ್ಯೂಜಿಲೆಂಡ್ ಮುಖಾಮುಖಿ

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ಭಾರತ ಟಿ20 ವಿಶ್ವಕಪ್ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಪರಾಭವಗೊಂಡಿತ್ತು. ನ್ಯೂಜಿಲೆಂಡ್ ಪಾಕಿಸ್ತಾನದ ವಿರುದ್ಧ ಸೋಲು ಕಂಡಿದ್ದು, ಸೆಮಿಫೈನಲ್ ಪ್ರವೇಶಿಸಲು ಇಂದಿನ ಪಂದ್ಯವೂ ಸೇರಿದಂತೆ ಸೂಪರ್ 12 ಹಂತದಲ್ಲಿ ಬಾಕಿ ಇರುವ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ.

ಇಂದು ಸಂಜೆ 7.30 ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮತ್ತು ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಮುಖಾಮುಖಿಯಾಗಲಿದ್ದು, ಉಭಯ ತಂಡಗಳು ಗೆಲುವಿಗೆ ಕಾರ್ಯತಂತ್ರ ರೂಪಿಸಿವೆ.

ಕಳೆದ ಪಂದ್ಯದಲ್ಲಿ ಆದ ತಪ್ಪುಗಳನ್ನು ಸರಿಪಡಿಸಿಕೊಂಡಿರುವ ಟೀಮ್ ಇಂಡಿಯಾ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಸಂಘಟಿತ ಪ್ರದರ್ಶನ ನೀಡಲು ಕಾರ್ಯತಂತ್ರ ರೂಪಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...