alex Certify BIG NEWS: ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ, ಸೌತ್ ಆಫ್ರಿಕಾ ಟಿ20 ಸರಣಿಗೆ ಕೊಹ್ಲಿ ಪಡೆ ರೆಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ, ಸೌತ್ ಆಫ್ರಿಕಾ ಟಿ20 ಸರಣಿಗೆ ಕೊಹ್ಲಿ ಪಡೆ ರೆಡಿ

ನವದೆಹಲಿ: ವಿಶ್ವದಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಇದೇ ಸಂದರ್ಭದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಆಗಸ್ಟ್ ನಲ್ಲಿ ಮೂರು ಪಂದ್ಯಗಳ ಟಿ-20 ಸರಣಿ ಆಯೋಜಿಸಲು ಒಪ್ಪಂದವಾಗಿದೆ.

ಸರ್ಕಾರದ ಅನುಮತಿಯನ್ನು ಪಡೆಯಲು ಕಾಯಲಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಒಪ್ಪಿಗೆ ಸೂಚಿಸಿರುವುದಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಸಿಇಒ ಜಾಕ್ಸ್ ಫಾಲ್ ಸಂತಸ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯ ನಿರ್ದೇಶಕ ಗ್ರೇಮ್ ಸ್ಮಿತ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸರಣಿ ನಡೆಸುವ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ. ಸರ್ಕಾರ ಒಪ್ಪಿಗೆ ಸೂಚಿಸಿದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಮೂರು ಪಂದ್ಯಗಳ ಟಿ-20 ಸರಣಿಯನ್ನಾಡಲಿದೆ. ಆಗಸ್ಟ್ ನಲ್ಲಿ ಸರಣಿ ನಡೆಯದಿದ್ದರೆ 2021 ರ ಫೆಬ್ರವರಿ ಒಳಗೆ ಸರಣಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...