ನವದೆಹಲಿ: ನವೆಂಬರ್ 17 ರಿಂದ ಏಕದಿನ ಸರಣಿಯೊಂದಿಗೆ ಆರಂಭವಾಗಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
4 ಟೆಸ್ಟ್, 3 ಏಕದಿನ, 3 ಟಿ 20 ಪಂದ್ಯಗಳು ನಡೆಯಲಿದ್ದು, ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ತಂಡ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಟೆಸ್ಟ್ ತಂಡ:
ವಿರಾಟ್ ಕೊಹ್ಲಿ, ಮಾಯಾಂಕ್ ಅಗರವಾಲ್, ಪೃಥ್ವಿ ಶಾ, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಹನುಮ ವಿಹಾರಿ, ಶುಭಮನ್ ಗಿಲ್, ವೃದ್ಧಿಮಾನ್ ಶಹಾ, ರಿಷಬ್ ಪಂತ್, ಬೂಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಮಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.
ಏಕದಿನ ತಂಡ:
ವಿರಾಟ್ ಕೊಹ್ಲಿ, ಶಿಖರ್ ಧವನ್, ಶುಭಮನ್ ಗಿಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್ ಅವರು ಆಯ್ಕೆಯಾಗಿದ್ದಾರೆ.
ಟಿ-ಟ್ವೆಂಟಿ ತಂಡ:
ವಿರಾಟ್ ಕೊಹ್ಲಿ, ಶಿಖರ್ ಧವನ್, ಮಯಾಂಕ್ ಅಗರವಾಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ, ಮಹಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ ಆಯ್ಕೆಯಾಗಿದ್ದಾರೆ.