
ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದೆ. ಆಗಸ್ಟ್ 8 ರವರೆಗೆ ನಡೆಯಲಿರುವ ಒಲಿಂಪಿಕ್ಸ್ ಕೊರೋನಾ ಕಾರಣದಿಂದ ಪ್ರೇಕ್ಷಕರಿಲ್ಲದೇ ನಡೆಯಲಿದೆ.
ಜಪಾನ್ ರಾಜಧಾನಿ ಟೊಕಿಯೋ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನೆ ಸಮಾರಂಭದಲ್ಲಿ ಭಾರತದ 19 ಅಥ್ಲೀಟ್ ಗಳು ಭಾಗಿಯಾಗಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 19 ಅಥ್ಲೀಟ್ ಗಳು, 6 ಮಂದಿ ಅಧಿಕಾರಿಗಳು ಮಾತ್ರ ಪಾಲ್ಗೊಂಡಿದ್ದಾರೆ. ಧ್ವಜಧಾರಿಗಳಾಗಿ ಬಾಕ್ಸರ್ ಮೇರಿಕೋಮ್, ಪುರುಷರ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಭಾಗಿಯಾಗಿದ್ದಾರೆ. ಭಾರತದಿಂದ 125 ಅಥ್ಲೀಟ್ ಗಳು ಒಲಿಂಪಿಕ್ಸ್ ನಲ್ಲಿ ಭಾಗಿಯಾಗಿದ್ದಾರೆ. ಕೋಚ್, ಸಿಬ್ಬಂದಿ ಸೇರಿ ಒಟ್ಟು 228 ಜನರ ತಂಡ ಟೊಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದಾರೆ.