ಟೋಕಿಯೋ ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದೆ.
ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ಉತ್ತಮ ಪ್ರದರ್ಶನ ನೀಡಿದ ಭಾರತ ಸ್ಪೇನ್ ವಿರುದ್ಧ ಜಯಗಳಿಸಿದೆ. ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ದಾಖಲಿಸಿ ಮುಂದಿನ ಸುತ್ತಿಗೆ ಎಂಟ್ರಿ ಕೊಟ್ಟಿದೆ.
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪ್ರಯಾಸದ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ, ಎರಡನೇ ಪಂದ್ಯದಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಮೂರನೇ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಕಂಬ್ಯಾಕ್ ಮಾಡಿದೆ.