ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಮಹಿಳಾ ವೆಲ್ಟರ್ವೈಟ್ ವಿಭಾಗದಲ್ಲಿ ಸೆಮಿಫೈನಲ್ ತಲುಪಿದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಇತಿಹಾಸ ನಿರ್ಮಿಸಿದ್ದಾರೆ.
ಭಾರತದ ಎರಡನೇ ಪದಕವನ್ನು ದೃಢೀಕರಿಸಲು ಲವ್ಲಿನಾ ಬೊರ್ಗೊಹೈನ್ ಮಹಿಳಾ ವೆಲ್ಟರ್ವೈಟ್ ವಿಭಾಗದಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಮಹಿಳಾ ವೆಲ್ಟರ್ವೈಟ್ ವಿಭಾಗದ 64 -69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಪ್ರತಿಸ್ಪರ್ಧಿ ಮಾಜಿ ವಿಶ್ವ ಚಾಂಪಿಯನ್ ತೈಪೆ ಚೀನಾದ ಚೆನ್ ನಿಯಾನ್ ಚಿನ್ ವಿರುದ್ಧ 4 -1 ಅಂತರದಿಂದ ಜಯಗಳಿಸಿ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಭಾರತಕ್ಕೆ ಅದ್ಭುತ ಸುದ್ದಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.