alex Certify ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿಗೆ ಮೋದಿ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿಗೆ ಮೋದಿ ಅಭಿನಂದನೆ

ಟೊಕಿಯೋ ಪ್ಯಾರಾಲಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಕನ್ನಡಿಗ ಶಿವಮೊಗ್ಗದ ಸುಹಾಸ್ ಯತಿರಾಜ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ ಸುಹಾಸ್ ಕಾರ್ಯನಿರ್ವಹಿಸುತ್ತಿದ್ದಾರೆ. ಟೊಕಿಯೋ ಒಲಂಪಿಕ್ಸ್ ನಲ್ಲಿ ಸುಹಾಸ್ ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ಎಲ್4 ಫೈನಲ್ ಪಂದ್ಯದಲ್ಲಿ ಬೆಳ್ಳಿಪದಕ ಜಯಿಸಿದ್ದಾರೆ.

ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ನೀವು ಕರ್ನಾಟಕ ಮತ್ತು ದೇಶಕ್ಕೆ ಗೌರವ ತಂದುಕೊಟ್ಟಿದ್ದೀರಿ. ಸೇವೆ ಮತ್ತು ಕ್ರೀಡೆಯ ಅದ್ಭುತ ಸಂಗಮ ನೀವು. ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಯ ಪದಕ ಗೆದ್ದ ನಿಮಗೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಇದಕ್ಕೆ ಸುಹಾಸ್ ಅವರು ಪ್ರಧಾನಿಯವರಿಗೆ ಧನ್ಯವಾದ ಹೇಳಿ ಅವರೊಂದಿಗೆ ಮಾತನಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...