
ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 7 ಪದಕ ಬಂದಿದೆ. 1 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಭಾರತದ ಕ್ರೀಡಾಪಟುಗಳು ಗಳಿಸಿದ್ದಾರೆ.
ಭಾರತದ ಪದಕ ಬೇಟೆ ಇಂದು ಕೂಡ ಮುಂದುವರೆದಿದ್ದು, ಜಾವೆಲಿನ್ ಥ್ರೋ ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ಬಂದಿದೆ. ದೇವೇಂದ್ರ ಜಜಾರಿಯಾ ಬೆಳ್ಳಿ, ಸುಂದರ ಸಿಂಗ್ ಅವರು ಕಂಚಿನ ಪದಕ ಗಳಿಸಿದ್ದಾರೆ.
ಡಿಸ್ಕಸ್ ಥ್ರೋನಲ್ಲಿ ಯೋಗೇಶ್ ಕತಾರಿಯಾ ಬೆಳ್ಳಿ ಪದಕ ಗಳಿಸಿದ್ದಾರೆ.
ಅವನಿ ಲೇಖಾರಾ ಮಹಿಳೆಯರ 10 ಮೀ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಫೈನಲ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದರು.
ಹೈ ಜಂಪರ್ ನಿಶಾದ್ ಕುಮಾರ್ ಕೂಡ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದರು.
ವಿನೋದ್ ಕುಮಾರ್ ಪುರುಷರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.