ಟೋಕಿಯೊದಲ್ಲಿ ಪ್ಯಾರಾಲಿಂಪಿಕ್ಸ್ ನಲ್ಲಿ ಶುಕ್ರವಾರ ನಡೆದ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ.
ಹರ್ವಿಂದರ್ ಸಿಂಗ್ ಕಂಚಿನ ಪದಕ ಗಳಿಸಿದ್ದು, ಇದರೊಂದಿಗೆ ಪ್ಯಾರಾಲಿಂಪಿಕ್ಸ್ ಬಿಲ್ಲುಗಾರಿಕೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಹರ್ವಿಂದರ್ ಸಿಂಗ್ ಪಾತ್ರರಾದರು.
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಇತಿಹಾಸ ನಿರ್ಮಿಸಿದ್ದು, ಹರ್ವಿಂದರ್ ಸಿಂಗ್ ಶೂಟ್ ಆಫ್ ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಟೋಕಿಯೊದಲ್ಲಿ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ 13 ಪದಕ ಗಳಿಸಿದೆ.