ದುಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಎಂದೇ ಹೇಳಲಾಗುವ ಐಪಿಎಲ್ ಆಯೋಜನೆ್ಎ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಐಪಿಎಲ್ ಟೂರ್ನಿಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸಲ್ಲಿಸಿದ ಪ್ರಸ್ತಾಪವನ್ನು ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಸ್ವೀಕರಿಸಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಶೇಖ್ ನಹಾಯನ್ ಮುಬಾರಕ್ ಅಲ್ ನಹಾಯನ್ ಅವರು, ಪ್ರತಿಷ್ಠಿತ ಕ್ರಿಕೆಟ್ ಲೀಗ್ ಆಯೋಜನೆಗೆ ನಮ್ಮ ದೇಶವನ್ನು ಆಯ್ಕೆ ಮಾಡಿಕೊಂಡಿರುವುದು ಹೆಮ್ಮೆಯೆನಿಸಿದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಎಲ್ಲಾ ಸುರಕ್ಷತೆಯೊಂದಿಗೆ ಪಂದ್ಯಾವಳಿ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.