alex Certify ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ: ವರ್ಣರಂಜಿತ ಟೂರ್ನಿ ಐಪಿಎಲ್ ಆಯೋಜನೆಗೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ: ವರ್ಣರಂಜಿತ ಟೂರ್ನಿ ಐಪಿಎಲ್ ಆಯೋಜನೆಗೆ ಸಿದ್ಧತೆ

ದುಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಎಂದೇ ಹೇಳಲಾಗುವ ಐಪಿಎಲ್ ಆಯೋಜನೆ್ಎ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಐಪಿಎಲ್ ಟೂರ್ನಿಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸಲ್ಲಿಸಿದ ಪ್ರಸ್ತಾಪವನ್ನು ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಸ್ವೀಕರಿಸಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ.

ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಶೇಖ್ ನಹಾಯನ್ ಮುಬಾರಕ್ ಅಲ್ ನಹಾಯನ್ ಅವರು, ಪ್ರತಿಷ್ಠಿತ ಕ್ರಿಕೆಟ್ ಲೀಗ್ ಆಯೋಜನೆಗೆ ನಮ್ಮ ದೇಶವನ್ನು ಆಯ್ಕೆ ಮಾಡಿಕೊಂಡಿರುವುದು ಹೆಮ್ಮೆಯೆನಿಸಿದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಎಲ್ಲಾ ಸುರಕ್ಷತೆಯೊಂದಿಗೆ ಪಂದ್ಯಾವಳಿ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...