alex Certify ಫಿಕ್ಸಿಂಗ್ ಆರೋಪದಡಿ ಇಬ್ಬರು ಕ್ರಿಕೆಟಿಗರ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಿಕ್ಸಿಂಗ್ ಆರೋಪದಡಿ ಇಬ್ಬರು ಕ್ರಿಕೆಟಿಗರ ಅಮಾನತು

ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳ ಸಂದರ್ಭದಲ್ಲಿ ಫಿಕ್ಸಿಂಗ್ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಯುನೈಟೆಡ್ ಅರಬ್ ಎಮಿರೇಟ್ಸ್ ಕ್ರಿಕೆಟಿಗರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಎರಡು ವರ್ಷಗಳ ಹಿಂದೆ ಕ್ರಿಕೆಟಿಗರಾದ ಮಹಮ್ಮದ್ ನವೀದ್ ಮತ್ತು ಶೈಮನ್ ಅನ್ವರ್ ಪಂದ್ಯಗಳನ್ನು ಫಿಕ್ಸ್ ಮಾಡಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದ್ದು, ಇದು ಈಗ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರಿಬ್ಬರನ್ನು ಅಮಾನತುಗೊಳಿಸಲಾಗಿದೆ.

ಕುತೂಹಲಕರ ಸಂಗತಿಯೆಂದರೆ 2019ರ ಟಿ10 ಲೀಗ್ ಸಂದರ್ಭದಲ್ಲೂ ಮಹಮ್ಮದ್ ನವೀದ್ ಪಂದ್ಯಗಳನ್ನು ಫಿಕ್ಸಿಂಗ್ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...